ಪುತ್ತೂರು: ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ನೇತ್ರದಾನ ನೋಂದಣಿ, ಮಧುಮೇಹ ಉಚಿತ ತಪಾಸಣೆ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 23ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮ ಪುತ್ತೂರಿನ ಸೈನಿಕ ಭವನ ರಸ್ತೆಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಸಮಾಜದಲ್ಲಿರುವ ಅಶಕ್ತರೊಂದಿಗೆ ಸಕ್ರಿಯವಾಗಿ ನಿಲ್ಲಬೇಕು. ಅಂತಹ ಕೆಲಸವನ್ನು ಈ ತಂಡವು ಮಾಡುತ್ತಿದೆ. ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಮಾಜದ ಕಣ್ಣಿರನ್ನು ಒರೆಸುವಂತ ಶಕ್ತಿಯನ್ನು ನೀಡಲಿ. ತನು ಮನ ಧನ ಸಹಾಯದೊಂದಿಗೆ ನಾನು ಕೂಡ ನಿಮ್ಮ ಜೊತೆ ಕೈ ಜೋಡಿಸುತ್ತೆನೆಂದು ಹೇಳಿದರು.
ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಿಮಗೆ ಯಾವಾಗಲೂ ದೇವರ ಅನುಗ್ರಹ ಸಿಗಲಿ ನಾನು ಕೂಡ ನಿಮ್ಮ ಜೊತೆ ಇದ್ದೇನೆ ಎಂದು ಹೇಳುತ್ತ ತಂಡಕ್ಕೆ ಶುಭ ಹಾರೈಸಿದರು.
ಸಂಸ್ಥೆಯ ಕಾನೂನು ಸಲಹೆಗಾರಾರದ ಪುತ್ತೂರಿನ ನ್ಯಾಯವಾದಿ ಹೀರಾಉದಯ್ ರವರು ಮಾತನಾಡಿ ನಾನು ಯಾವಾಗಲೂ ಈ ತಂಡದ ಜೊತೆ ಇದ್ದೇನೆ,ಅರುಣ್ ಕುಮಾರ್ ಪುತ್ತಿಲ ರವರು ನಮ್ಮ ಜೊತೆ ಕೈ ಜೋಡಿಸಿ ದ್ದಾರೆ ಇದು ನಮ್ಮ ತಂಡಕ್ಕೆ ಒಂದು ಬಲ ಬಂದ ಹಾಗಾಯಿತು.ಈ ಸಂಸ್ಥೆ ಇನ್ನೂ ಉತ್ತಮವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ 69,000 ಸಾವಿರ ರೂ. ಮೊತ್ತದ 69 ಆಹಾರ ಕಿಟ್ ವಿತರಣೆ ಮಾಡಲಾಯಿತು. 56 ಜನರಿಗೆ ಬಿಪಿ, ಶುಗರ್ ತಪಾಸಣೆ ಮಾಡಲಾಯಿತು. ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತಿರುವ ಬಡಗನ್ನೂರಿನ ಅನನ್ಯ ಅವರಿಗೆ ಒಂದು ತಿಂಗಳಿಗೆ ಬೇಕಾಗುವ 2750/- ರೂಪಾಯಿಯ ಔಷಧಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷೆ ಶೋಭಾ ಮಡಿವಾಳ, ಸ್ಥಾಪಕ ಅಧ್ಯಕ್ಷ ಚೇತನ್ ಕುಮಾರ್, ಕಾರ್ಯದರ್ಶಿ ಮೋಹನ್ ಸಿಂಹವನ, ಸಲಹೆಗಾರರಾದ ಪ್ಯಾಟ್ರಿಕ್ ಸಪ್ರಿಯನ್ ಮಸ್ಕರೇನಸ್, ಸದಸ್ಯರಾದ ಕಾವ್ಯ, ಸರಸ್ವತಿ, ಚಿತ್ರ ಉಪಸ್ಥಿತರಿದ್ದರು. ಆಶಾ, ಶೃತಿಕಾ ಪ್ರಾರ್ಥಿಸಿದರು. ಗೀತಾ ಸ್ವಾಗತಿಸಿದರು. ಸಂಚಾಲಕ, ಕಲಾವಿದ ಕೃಷ್ಣಪ್ಪ ಶಿವನಗರ ಹಾಗೂ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.