ವಿದ್ಯಾರ್ಥಿಗಳು ಐ.ಎ.ಎಸ್- ಐ.ಪಿ.ಎಸ್ ಅಧಿಕಾರಿಗಳಾಗಬೇಕು : ಶಾಸಕ ಅಶೋಕ್ ಕುಮಾರ್ ರೈ | 19ನೇ ತಾಲೂಕು ಸಾಹಿತ್ಯ ಸಮ್ಮೇಳನ ದತ್ತಿ ನಿಧಿ ಉಪನ್ಯಾಸ

ಪುತ್ತೂರು: ಪುತ್ತೂರು ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ  ಸವಿನೆನಪಿಗಾಗಿ ಸ್ಥಾಪಿಸಿದ ದತ್ತಿನಿಧಿ ಉಪನ್ಯಾಸ  ಕಾರ್ಯಕ್ರಮ ಹಾಗೂ ಶಾಲಾ ಪ್ರಾರಂಭೋತ್ಸವ ಕೆಯ್ಯೂರರು ಕೆ ಪಿ ಎಸ್ ಶಾಲಾ ಸಭಾಂಗಣದಲ್ಲಿ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಐ.ಎ.ಎಸ್ ಐ.ಪಿ.ಎಸ್ ಪರೀಕ್ಷೆಗಳನ್ನು ಎದುರಿಸಿ ಉನ್ನತ ಅಧಿಕಾರಿಗಳಾಗಬೇಕು, ಸರ್ಕಾರದ ಕಡೆಯಿಂದ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಶಾಲೆಗೆ ಒದಗಿಸುವುದಾಗಿ ಭರವಸೆ ನೀಡಿ ದರು.

ಶಿಕ್ಷಣದಲ್ಲಿ ಸಂಗೀತ ಮತ್ತು ಸಾಹಿತ್ಯದ ಪಾತ್ರ ಎಂಬ ವಿಷಯದ ಬಗ್ಗೆ ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಅವರು ಉಪನ್ಯಾಸ ನೀಡಿದರು. ಪುತ್ತೂರು ಕ ಸಾ ಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದತ್ತಿ ನಿಧಿ ಕುರಿತಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಸ್ಪರ್ಧಾ  ವಿಜೇತರಿಗೆ  ಎ ಕೆ ಜಯರಾಮ್ ರೈ,  ದಂಬೆಕಾನ ಸದಾಶಿವ ರೈ, ಚರಣ್ ಕುಮಾರ್ ಸಣಂಗಳ  ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಎಸ್ ಭಂಡಾರಿ, ಕಾಲೇಜು ಪ್ರಿನ್ಸಿಪಾಲ್ ಇಸ್ಮಾಯಿಲ್ ಪಿ  ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಕೆ.ಎಸ್ ವಿನೋದ್ ಕುಮಾರ್  ಸ್ವಾಗತಿಸಿದರು, ಮುಖ್ಯ ಶಿಕ್ಷಕ ಬಾಬು ಎಂ ವಂದಿಸಿದರು. ಜೆಸ್ಸಿ ಪಿ ವಿ ಕಾರ್ಯಕ್ರಮ ನಿರೂಪಿಸಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top