ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲುಗಳೆರಡು ಮುಖಾಮುಖಿ ಡಿಕ್ಕಿ‌ ಹೊಡೆದಿದ್ದು, ಸಾವು – ನೋವಿನ ಪ್ರಮಾಣ ಹೆಚ್ಚಿದೆ.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಘಟನಾ ಸ್ಥಳಕ್ಕೆ 50ಕ್ಕೂ ಹೆಚ್ಚು ಆಂಬುಲೆನ್ಸ್ ಅನ್ನು ರವಾನಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top