ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆ ಜಾರಿಗೊಳಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಜೂನ್ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೆ ಈ ಯೋಜನೆಗಳನ್ನು ತಲುಪಿಸುತ್ತೇವೆ ಎಂದರು.

‘ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.



































 
 

”ಉಚಿತ ವಿದ್ಯುತ್”

ಎಲ್ಲರ ಮನೆಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್(ಗೃಹ ಜ್ಯೋತಿ) ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ” ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆಯೆಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅಕೌಂಟ್ ನಂಬರ್, ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಸಲ್ಲಿಸಬೇಕಾಗುತ್ತದೆ . ಜೂನ್ 15 ರಿಂದ ಜುಲೈ 15 ರವರೆಗೆ ಅಪ್ಲೈ ಮಾಡಲು ಅವಕಾಶ. ಆಗಸ್ಟ್ 15ರಿಂದ ಗ್ರಹಲಕ್ಷ್ಮಿ ಯೋಜನೆ ಜಾರಿ. ಅಂದರೆ ಆಗಸ್ಟ್ 15 ರ ನಂತರ ತಿಂಗಳಿಗೆ ಎರಡು ಸಾವಿರ ದೊರೆಯುತ್ತದೆ. ಮನೆಯ ಯಜಮಾನಿಗೆ ಮಾತ್ರ ತಿಂಗಳಿಗೆ 2000. ಮನೆ ಯಜಮಾನಿ ಎಂದು ಯಾರು ಎಂದು ಮನೆಯವರು ನಿರ್ಧರಿಸಿ ಹೇಳಬೇಕು. ಆಗಸ್ಟ್ 15 ಸ್ವಾತಂತ್ರೋತ್ಸವ ದಿನ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top