ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಥಳದ ಭೀಕರತೆ ಪರಿಶೀಲನೆ ಮಾಡಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಇನ್ನೊಂದೆಡೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಗಾಯಾಳುಗಳ ಜೀವ ಉಳಿಸಲು ರಕ್ತದ ಅವಶ್ಯಕತೆಯೂ ಹೆಚ್ಚುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಸ್ಪಂದನೆ ವ್ಯಕ್ತವಾಗಿದ್ದು, ರಕ್ತದಾನ ಮಾಡಲು ಜನರು ಸಾಲಿನಲ್ಲಿ ಜನರು ನಿಂತಿರುವ ದೃಶ್ಯವೂ ಕಂಡುಬಂದಿದೆ.