ಪುತ್ತೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜೂ.10 ರಂದು ನಡೆಯಲಿದೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನ ಶಿಥಿಲಾವಸ್ಥೆಯಲ್ಲಿದ್ದು, ಜೀರ್ಣೋದ್ಧಾರಗೊಳಿಸು ಸಂಕಲ್ಪವನ್ನು ಈಗಾಗಲೇ ಮಾಡಲಾಗಿದ್ದು., ಜೂ.10 ರಂದು ಬೆಳಿಗ್ಗೆ 6.58 ರ ಮುಹೂರ್ತದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶಿಲಾನ್ಯಾಸಕ್ಕೆ ಚಾಲನೆ ನೀಡಲಾಗುವುದು.
ಈ ದೇವಸ್ಥಾನವು ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ತೀರ್ಥ ಕ್ಷೇತ್ರವಾಗಿದೆ.