ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ, ನಿವೃತ್ತ ಎ.ಎಸ್.ಐ., ವಳತ್ತಡ್ಕ ನಿವಾಸಿ ರುಕ್ಮಯ್ಯ ಮೂಲ್ಯ (62 ವ.)ರವರು ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಮಧ್ಯಾಹ್ನ ಮನೆಯಲ್ಲಿ ಲಘು ಹೃದಯ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಮೃತಪಟ್ಟಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
























