ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಪಿಎಂಶ್ರೀ ಯೋಜನೆಯಡಿ ಆಯ್ಕೆಯಾದ ವೀರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ  ದಿನಾಚರಣೆಯನ್ನು ಆಚರಿಸಲಾಯಿತು.

ಗಿಡಗಳನ್ನು ನೀಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸ್ಕೌಟ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಗಿಡಗಳನ್ನು ಮನೆಯಿಂದ ತಂದು ನೀಡಲು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಹಾಡಿದರು.  ಬಳಿಕ ಸ್ಲೋಗನ್ ಗಳನ್ನು ಹಾಕಿ ಮಕ್ಕಳಿಂದ ಹೇಳಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲಾಖೆಯ ವತಿಯಿಂದ ನೀಡಲಾದ  ಮಾಹಿತಿಯ ವೀಡಿಯೋವನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು.





















































 
 

ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದ ಸಂಯೋಜನೆಯನ್ನು ಹಿರಿಯ ಶಿಕ್ಷಕಿ ಹರಿಣಾಕ್ಷಿ ನೆರೆವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಸಂದಭೋಚಿತವಾಗಿ ಮಾತನಾಡಿದರು. ಶಿಕ್ಷಕಿ ಶೋಭಾ ಸ್ವಾಗತಿಸಿ, ಹೇಮಾವತಿ ವಂದಿಸಿದರು, ಕವಿತಾ,  ಶರಣ್ಯ, ನಳಿನಿ, ಚಂದ್ರಾವತಿ ವಿವಿಧ ಕಾರ್ಯಕ್ರಮಗಳನ್ನು ಸಂಯೋಜಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top