ಪುತ್ತೂರು: ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಸ್ಥಳೀಯರು, ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಧಿಕಾರಿಯವರು ಪ್ರಕಟಣೆ ನೀಡಿದ್ದಾರೆ.
ಮಕ್ಕಳು, ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡದ ಕೆಳಗೆ, ಬಳಿ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ಸೇರಬೇಕು ಎಂದು ದ.ಕ., ಉಡುಪಿ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.