ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಇಲೈಟ್ ಹಾಗೂ ರೋಟರಿ ಕ್ಲಬ್ ನ್ಯೂ ಟಾಂಪಾನೂನ್ (ಅಮೇರಿಕಾ, ಫ್ಲೋರಿಡಾ) ಜಂಟಿಯಾಗಿ ಪು್ತ್ತೂರು ಸರಕಾರಿ ಆಸ್ಪತ್ರೆಗೆ 6 ಡಯಾಲಿಸಿಸ್ ಮೆಷಿನ್ ಕೊಡುಗೆಯಾಗಿ ನೀಡಲಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮ ಜೂ.9 ಶುಕ್ರವಾರ ನಡೆಯಲಿದೆ ಎಂದು ರೋಟರಿ ಅಧ್ಯಕ್ಷ ರೋ.ಡಾ.ಪೀಟರ್ ವಿಲ್ಸನ್ ಪ್ರಭಾಕರ್ ತಿಳಿಸಿದ್ದಾರೆ.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಪಿಸಿಸ್ ಮೆಷಿನ್‍ಗಳಿದ್ದು, 53 ಡಯಾಲಿಸಿಸ್ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ. ಸುಮಾರು 90 ರಷ್ಟು ಮಂದಿ ಕಾಯ್ದಿರಿಸಿದ ಪಟ್ಟಿಯಲ್ಲಿದ್ದು, ಈ ನಿಟ್ಟಿನಲ್ಲಿ ರೋಗಿಗಳಿಗೆ ಹೆಚ್ಚಿನ ಸೇವೆ ನೀಡುವ ನಿಟ್ಟಿನಲ್ಲಿ 6 ಡಯಾಲಿಸಿಸ್ ಮೆಷಿನ್ ಸುಮಾರು 52.50 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಶುಕ್ರವಾರ ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಡಯಾಲಿಸಿಸ್ ಮೆಷಿನ್ ನ್ನು ಲೋಕಾರ್ಪಣೆಗೊಳಿಸಲಿದ್ದು, ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3181 ರ ಗವರ್ನರ್ ಎನ್.ಪ್ರಕಾಶ್ ಕಾರಂತ್, ರೊ. ಕೆ.ಕೃಷ್ಣ ಶೆಟ್ಟಿ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ರೊ.ಡಾ.ಸೂರ್ಯನಾರಾಯಣ ಕೆ. , ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್ ಎಂ., ರೊ.ಹೆಚ್.ಆರ್.ಕೇಶವ, ವಿಕ್ರಮದತ್ತ, ಪಿ.ಕೆ.ರಾಮಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಸರಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಆಶಾಜ್ಯೋತಿ ಕೆ., ಜಿಲ್ಲಾ ರೋಟರಿ ಕಾರ್ಯದರ್ಶಿಗಳಾದ ನಾರಾಯಣ ಹೆಗ್ಡೆ, ಕೆ.ವಿಶ್ವಾಸ್ ಶೆಣೈ, ರಾಜೇಂದ್ರ ಕಲ್ಬಾವಿ, ಅಸಿಸ್ಟೆಂಟ್ ಗವರ್ನರ್ ಎ.ಜೆ.ರೈ, ಶಿವರಾಮ ಏನೆಕಲ್, ನಗರಸಭೆ ಸದಸ್ಯೆ ಯಶೋದಾ ಹರೀಶ್, ವಲಯ ಸೇನಾನಿ ಹರ್ಷಕುಮಾರ್ ರೈ, ಸೆನೋರಿಟಾ ಆನಂದ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಡಯಾಲಿಸಿಸ್ ಸೆಂಟರ್ ಯೋಜನೆ ಸಂಯೋಜಕ ರೊ.ಆಸ್ಕರ್ ಆನಂದ್ ಮಾತನಾಡಿ, ಡಯಾಲಿಸಿಸ್ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ರೋಗದ ಕುರಿತು ಜನಜಾಗೃತಿಯನ್ನು ಮುಂದಿನ ದಿನಗಳಲ್ಲಿ ಎಲ್ಲರ ಕೈಜೋಡಿಸುವಿಕೆಯಿಂದ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೊ.ರಾಜೇಶ್ವರಿ ಜಿ.ಆಚಾರ್, ರೊ.ರತ್ನಾಕರ ರೈ, ರೊ.ಪಶುಪತಿ ಶರ್ಮ ಉಪಸ್ಥಿತರಿದ್ದರು.