ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಯುಜಿ ಲೆವೆಲ್ ಫೆಸ್ಟ್ “ಕೃತ್ವ 2023” ಕಾರ್ಯಕ್ರಮ ಗುರುವಾರ ನಡೆಯಿತು.

ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಪಿಗಳನ್ನು ಅನಾವರಣಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷೆ ಪ್ರತಿಭಾ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿ ಹೇಳಿದರು.
ಮತ್ತೋರ್ವ ಅತಿಥಿ ಕೆನರಾ ಬ್ಯಾಂಕ್ ಸಂಪ್ಯ ಶಾಖೆಯ ವ್ಯವಸ್ಥಾಪಕಿ ಡಾ. ದೀಪ ಎಸ್. ರಾಜ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಲು ಕೃತ್ವ ದಂತಹ ಸ್ಪರ್ಧೆಗಳು ಅವಶ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಜಯಂತ್ ನುಡುಬೈಲು ಶುಭ ಹಾರೈಸಿದರು. ಸಮಾರಂಭದಲ್ಲಿ ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕೃತ್ವ ಫೆಸ್ಟ್‌ನ ಸಂಯೋಜಕ ರಕ್ಷಣ ಟಿ.ಆರ್, ವಿದ್ಯಾರ್ಥಿ ಸಂಯೋಜಕ ಗಗನ್‌ದೀಪ್ ಹಾಗೂ ಪ್ರಣಮ್ಯ ಉಪಸ್ಥಿತರಿದ್ದರು.
ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕು. ದಕ್ಷಿತಾ ಸ್ವಾಗತಿಸಿ, ಕು. ಪ್ರಗತಿ ಕೆ ವಂದಿಸಿದರು. ಕು. ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿದರು.