ಸವಣೂರು: ಎಸ್.ಎನ್.ಆರ್.ರೂರಲ್ ಎಜುಕೇನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ ಜೂ.9ರಂದು ನಡೆಯಿತು.


ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಎನ್.ಸುಂದರ ರೈ ,ಕಸ್ತೂರಿ ಕಲಾ ಸೀತಾರಾಮ ರೈ ,ರಶ್ಮಿ ಅಶ್ವಿನ್ ಶೆಟ್ಟಿ,ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ,ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ನಾರಾಯಣ ಮೂರ್ತಿ ಮೊದಲಾದವರಿದ್ದರು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ ಸ್ವಾಗತಿಸಿದರು. ಉಪ ಪ್ರಾಚಾರ್ಯೆ ಶಶಿಕಲಾ ಎಸ್.ಆಳ್ವ ವಂದಿಸಿದರು
ಸಭಾ ಕಾರ್ಯಕ್ರಮಕ್ಕೂ ಮುನ್ನ ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸವಣೂರು ಪೇಟೆಯಿಂದ ಶಿಕ್ಷಣ ಸಂಸ್ಥೆಯವರೆಗೆ ಮೆರವಣಿಗೆ ನಡೆಯಿತು.