ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದೆ.
31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ.


ಬೆಂಗಳೂರು ನಗರಕ್ಕೆ ಡಿ.ಕೆ. ಶಿವಕುಮಾರ್, ತುಮಕೂರಿಗೆ ಡಾ. ಜಿ. ಪರಮೇಶ್ವರ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರಗಿಗೆ ಪ್ರಿಯಾಂಕ್ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.