ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಜೂ.11 ಭಾನುವಾರ ಬೆಳಿಗ್ಗೆ 8 ರಿಮದ 11.15 ತನಕ ನಡೆಯಲಿದೆ.
ವೇದ ಸಂವರ್ಧನಾ ಪ್ರತಿಷ್ಠಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.
ಈ ಲೋಕ ಕ್ಷೇಮಕರ ಕಾರ್ಯದಲ್ಲಿ ಭಾಗವಹಿಸಿ ಕೃತಾರ್ಥರಾಗೋಣ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.