ಪುತ್ತೂರು: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಚಂಡೆ ವಾದನ ತರಬೇತಿ ಉದ್ಗಾಟನೆ ನಡೆಯಿತು.
ತೆಂಕತಿಟ್ಟಿನ ಹೆಸರಾಂತ ಚಂಡೆ ವಾದಕ ದೇಲಂತಮಜಲು ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ತರಬೇತಿಯ ಪ್ರಯೋಜನವನ್ನು ಪಡೆದು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಸ್. ಡಿ.ಎಂ.ಸಿ ಸದಸ್ಯ ವಿಷ್ಣು ಕನ್ನಡಗುಳಿ,ಮಾಣಿಲ ಮಾತನಾಡಿ, ಅನೇಕ ಪ್ರಸಿದ್ಧ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರ ತವರೂರಾಗಿದೆ, ಮುಂದೆ ನಮ್ಮ ವಿದ್ಯಾರ್ಥಿಗಳೂ ಸಹ ಇಂತಹ ಕಲಾವಿದರಾಗಿ ರೂಪುಗೊಳ್ಳಲಿ ಎಂದರು.
ಮುಖ್ಯಶಿಕ್ಷಕ ಭುವನೇಶ್ವರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉಮಾನಾಥ ರೈ ವಂದಿಸಿದರು. ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.