ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ ಜೂ.14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8.30 ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಮಧ್ಯಾಹ್ನ 11.10 ರ ಸಿಂಹಲಗ್ನ ಶುಭ ಮುಹೂರ್ತದಲ್ಲಿ ಶ್ರೀ ದೇವರಿಗೆ ಅನುಜ್ಞಾ ಪ್ರಾರ್ಥನೆ, ಅನುಜ್ಞಾ ಕಲಶಾಭಿಷೇಕ ನಡೆಯಲಿದೆ.
12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷ ನವೀನ್ ಚಂದ್ರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























