ಪುತ್ತೂರು: ರಾಜ್ಯ ಸರಕಾರ ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸುವ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.
ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ನುದಾನ ನೀಡುವಂತೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದವು. ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದ್ದು, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶವಿಲ್ಲ. ಸಾರಿಗೆ ನಿಮಗಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ.
ಹಿಂದಿನ ಬಿಜೆಪಿ ಸರಕಾರ ಸಾರಿಗೆ ನೌಕರರಿಗೆ ಶೇ.15 ವೇತನ ಪರಿಷ್ಕರಣೆ ಮಾಡಿತ್ತು. ಆ ಹೆಚ್ಚುವರಿ ಅನುದಾನವನ್ನು ರಾಜ್ಯ ಸರಕಾರವೇ ಭರಿಸುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಅನುದಾನ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದೆ.