ಮಂಗಳೂರು: ದ.ಕ.ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ.
ದ.ಕ.ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿ ಕುಮಾರ್ ಹಾಗೂ ಜಿಪಂ ಸಿಇಒ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಲ್ಲೈ ಮುಹಿಲನ್ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಜಿಲ್ಲಾಧಿಕಾರಿ ರವಿ ಕುಮಾರ್ ಅವರ ನಿಯೋಜನೆ ಸ್ಥಳದ ಮಾಹಿತಿ ಲಭ್ಯವಾಗಿಲ್ಲ. ಸಿಇಒ ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.