ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ

ಧರ್ಮಸ್ಥಳ : 11 ವರ್ಷಗಳ ಹಿಂದೆ ನಡೆದ ದ.ಕ.ಜಿಲ್ಲೆಯ ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ತೀರ್ಪು ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ಪ್ರಕಟವಾಗಲಿದೆ.

ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು 2012 ಅಕ್ಟೋಬರ್ 9 ರಂದು ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶಂಕಿತ ಆರೋಪಿ ಕಾರ್ಕಳ ತಾಲೂಕಿನ ಕುಕ್ಕುಂದೂರು ನಿವಾಸಿ ಸಂತೋಷ್ ರಾವ್ ಈ ಸಂದರ್ಭ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು ಬಳಿಕ ಪೊಲೀಸರಿಗೆ ಒಪ್ಪಿಸಲಾಗಿತ್ತು. ಬಳಿಕ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ಪ್ರಕರಣ ನಡೆದು 11 ವರ್ಷಗಳ ಬಳಿಕ ಇಂದು ತೀರ್ಪು ಹೊರಬೀಳಲಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top