ಜೂನ್ 21 : ಕಡಬದಲ್ಲಿ ಜನಜಾಗೃತಿ ವೇದಿಕೆಯ ಪದಗ್ರಹಣ, ನವಜೀವನೋತ್ಸವ ಕಾರ್ಯಾಕ್ರಮ

ಕಡಬ:  ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಸಮಾರಂಭ, ಯೋಜನೆಯ ವತಿಯಿಂದ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಮದ್ಯಮುಕ್ತರ ನವಜೀವನೋತ್ಸವ ಕಾರ್ಯಕ್ರಮ  ಜೂನ್ 21 ಬುಧವಾರ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಡಬ ತಾಲೂಕು ಜಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು ಹೇಳಿದರು.

ಅವರು ಸೋಮವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ,  ಕಡಬ ನೂತನ ತಾಲೂಕು ಆಗಿರುವ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನಿಂದ ಬೇರ್ಪಟ್ಟು ಕಡಬ ತಾಲೂಕು ಜಜಾಗೃತಿ ವೇದಿಕೆಯನ್ನು ಅಸ್ಥಿತ್ವಕ್ಕೆ ತರಲಾಗಿದೆ ಎಂದರು.

 ಜನಜಾಗೃತಿ ವೇದಿಕೆ ರಾಜ್ಯಾದ್ಯಂತ ವಿಸ್ತರಿಸಿಕೊಂಡು ಕಳೆದ 31ವರ್ಷಗಳಿಂದ ಕಾರ್ಯಾಚರಿಸುತ್ತಿದೆ,  ಈವರೆಗೆ ಒಟ್ಟು 1648 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1,13,393 ಜನರಿಗೆ ವ್ಯಸನ ಮುಕ್ತರಾಗಲು ಅವಕಾಶ ಕಲ್ಪಿಸಿಕೊಡಲಾಗಿದೆ. ಕಡಬ ತಾಲೂಕಿನಲ್ಲಿ 26 ಮದ್ಯವರ್ಜನ ಶಿಬಿರಗಳನ್ನು ನಡೆಸಿ 2800 ಜನಕ್ಕೂ ಮಿಕ್ಕಿ  ಮದ್ಯವ್ಯಸನ ಮುಕ್ತರಾಗಿದ್ದಾರೆ. ಕಡಬದಲ್ಲಿ  2800 ಸದಸ್ಯರ 24 ನವಜೀವನ ಸಮಿತಿಗಳಿವೆ, ಪಾನಮುಕ್ತರಿಗೆ ಸ್ವ-ಉದ್ಯೋಗ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಅವರ ಬದುಕಿನಲ್ಲಿ ಹೊಸಬೆಳಕು ಮೂಡಲು ಯೋಜನೆ ಹಾಕಲಾಗಿದೆ ಎಂದರು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೆಶಕ ವಿವೇಕ್ ವಿನ್ಸೆಂಟ್ ಪಾಯಸ್,  ದ.ಕ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಬಿ.ಸಿ ಟ್ರಸ್ಟ್‌ನ ಜಿಲ್ಲಾ ನಿರ್ದೆಶಕ ಪ್ರವೀಣ್ ಕುಮಾರ್, ಶ್ರೀ ದುರ್ಗಾಂಬಿಕ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕಡಬ ತಾಲೂಕು ಒಕ್ಕೂಟದ ಅಧ್ಯಕ್ಷ ಸಂತೋಷ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.































 
 

ಪತ್ರಿಕಾಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆಯ  ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಸದಸ್ಯ ಗೋಪಾಲಕೃಷ್ಣ,  ಕೇಂದ್ರ ಒಕ್ಕೂಟದ ಅಧ್ಯಕ್ಷ ಸಂತೋಷ್ ಕೆ, ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ವಿವಿಧ ವಲಯಗಳ ಮೇಲ್ವಿಚಾರಕರಾದ ವಿಜೇಶ್ ಜೈನ್, ರವಿಪ್ರಸಾದ್ ಆಲಾಜೆ, ಆನಂದ, ಸೋಮೇಶ್ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top