ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಜೂ.22 ರಂದು ಕರ್ನಾಟಕ ಬಂದ್ ಗೆ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಕರೆ ನೀಡಿದೆ.
ಕೆಸಿಸಿಐ ಮತ್ತು ಇತರ ಜಿಲ್ಲಾ ವಾಣಿಜ್ಯ ಮಂಡಳಿಗಳು ಬಂದ್ ಗೆ ಕರೆ ನೀಡಿದ್ದು, ಎಲ್ಲಾ ವ್ಯಾಪಾರ, ಕೈಗಾರಿಕೆಗಳು ಹಾಗೂ ಇಂಡಸ್ಟ್ರೀಸ್ ಗಳು ಅಂದು ಬಂದ್ ಆಗಲಿವೆ.
ಈಗಾಗಲೇ ಬಂದ್ ಗೆ 25 ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ ಗಳ ಬೆಂಬಲ ದೊರಕಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಈ ಕುರಿತು ಮಾಹಿತಿ ನೀಡಿರುವ ಕೆಸಿಸಿಐ, ಎಸ್ಕಾಂನ ವಿದ್ಯುತ್ ಬೆಲೆ ಏರಿಕೆಯನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ.
ಕಳೆದ ಎಂಟು ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮ ಗಂಭೀರತೆಯನ್ನು ಸರಕಾರಕ್ಕೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಈ ವರೆಗೆ ಸ್ಪಂದಿಸಿಲ್ಲ ಎಂದು ಹೇಳಿದೆ.