ಬೆಂಗಳೂರು: ಮೇ-ಜೂನ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ನೋಡಬಹುದಾಗಿದೆ.
ಪೂರಕ ಪರೀಕ್ಷೆಯ ಫಲಿತಾಂಶದಲ್ಲಿಯೂ ಬಾಲಕಿಯರು ಮುಂದಿದ್ದಾರೆ. ಒಟ್ಟು 62,111 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು,ಇವರಲ್ಲಿ 21,577 ವಿದ್ಯಾರ್ಥಿನಿಯರು (ಶೇ.34.74) ಉತ್ತೀರ್ಣರಾಗಿದ್ದಾರೆ. 95,645 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 28, 901 ಬಾಲಕರು (ಶೇ.30.22) ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಶೇ.32.69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.