ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಮಾಜಿ ಸಚಿವ ಆರ್.ಅಶೋಕ್ ಪ್ರತಿಭಟನೆಯ ವೇಳೆ ಮಾತನಾಡಿ, ಪೊಲೀಸರು ನಮ್ಮ ನ್ಯಾಯಯುತ ಪ್ರತಿಭಟನೆಗೆ ಅವಕಾಶ ಕೊಡದೆ ಬಿಜೆಪಿಯ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದೆ. ಕಾಂಗ್ರೆಸ್ ಯಾವ ಕಾರಣಕ್ಕೆ ಪ್ರತಿಭಟನೆ ಮಾಡಿದೆ ಅಂತ ಹೇಳುವ ಕೆಲಸ ಮಾಡಬೇಕಿತ್ತು. ಆದರೆ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಹೇಳಿದ್ದಾರೆ‌.





































 
 

ಬಿಜೆಪಿ ನಾಯಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಮಾಜಿ ಸಚಿವ ಆರ್. ಅಶೋಕ್, ಎಂ ಎಲ್ ಸಿ ರವಿಕುಮಾರ್, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top