ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗನ ಸನ್ನಿಧಿಯಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ಕೋಟೆ ಮಹಾಲಿಂಗೇಶ್ವರ ಭಟ್ (58) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು.
ಬೆಳ್ಳಾರೆ ಕೋಟೆ ಮನೆತನದವರಾದ ಮಹಾಲಿಂಗೇಶ್ವರ ಭಟ್ ಅವರು ಪುತ್ತೂರು ಕೊಡಿಪ್ಪಾಡಿ ಸಮೀಪದ ಬಿರಾವು ಎಂಬಲ್ಲಿ ವಾಸ್ತವ್ಯ ಹೂಡಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.