ಬೆಂಗಳೂರು: ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಈ ಸಾಲಿನ ಶೈಕ್ಷಣಿಕ ವರ್ಷದಿಂದ ವಾರಕ್ಕೊಮ್ಮೆ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.

ಜೂ.20 ರಿಂದ ಜು.15 ರ ತನಿ ಅಥವಾ ಮುಂದಿನ ಆದೇಶದ ವರೆಗೆ ನೀಡುವಂತೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಪೌಷ್ಠಿಯ ಆಹಾರವಾಗಿ ಬೇಸಿಯಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಮಧ್ಯಾಹ್ನ ಬಿಸಿಯೂಟದೊಂದಿಗೆ ವಾರದಲ್ಲಿ ಒಂದು ದಿನ ನೀಡುವಂತೆ ತಿಳಿಸಲಾಗಿದೆ.

ಕಲ್ಯಾಣ ಕರ್ನಾಟಕ ವಿಭಾಗದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ರಾಯಚೂರು, ಬೀದರ್ ಹಾಗೂ ವಿಜಯಪುರ ಈ ಎಂಟು ಜಿಲ್ಲೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಅನುದಾನದಲ್ಲಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆ ನೀಡುವ ಕಾರ್ಯಕ್ರಮ ಅನುಷ್ಠಾನ ಮಾಡುವಂತೆ ಸೂಚಿಸಲಾಗಿದೆ.