ಮಂಗಳೂರು : ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ನೇತೃತ್ವದಲ್ಲಿ ನಡೆಯುವ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಬುಧವಾರ ಆಚರಿಸಲಾಯಿತು.
ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಶ್ರೀಗಳು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ, ಸ್ವತಃ ಯೋಗ ಪ್ರಾತ್ಯಕ್ಷಿಕೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜಿಎಸ್ ಸ್ಕೂಲ್ ನ ಮುಖ್ಯ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.