ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಬೆಟ್ಟಂಪಾಡಿ ವಲಯದ ಪರಿಸರ ಮಾಹಿತಿ ಮತ್ತು ಸಸಿ ವಿತರಣಾ ಕಾರ್ಯಕ್ರಮ ಉಪ್ಪಳಿಗೆ ಸರಕಾರಿ ಪ್ರೌಢಶಾಲೆ ಯಲ್ಲಿ ನಡೆಯಿತು.
ವೇದಿಕೆಯಲ್ಲಿ ನಿಕಟಪೂರ್ವ ಡಿಎಂಸಿ ಅಧ್ಯಕ್ಷ ಕೃಷ್ಣಪ್ರಸಾದ ಆಳ್ವ, ಯೋಜನಾಧಿಕಾರಿ ಶಶಿಧರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯೆ ಮೀನಾಕ್ಷಿ, ವಲಯ ಅಧ್ಯಕ್ಷ ಬಾಲಕೃಷ್ಣ, ಶಿಕ್ಷಕ ರಾಮಚಂದ್ರ, ಒಕ್ಕೂಟದ ಅಧ್ಯಕ್ಷ ಹರೀಶ್ ಗೌಡ ಉಪಸ್ಥಿತರಿದ್ದರು.
ಕೃಷಿ ಮೇಲ್ವಿಚಾರಕ ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಶ್ಯಾಮಲ ಸ್ವಾಗತಿಸಿದರು. ವಲಯದ ಮೇಲ್ವಿಚಾರಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಭಾರತಿ ವಂದಿಸಿದರು. ಶಾಲೆಯ 150 ಮಕ್ಕಳಿಗೆ ಒಂದೊಂದು ಗಿಡ ವಿತರಿಸಲಾಯಿತು.