ಬೆಂಗಳೂರು: ಮನೆಯ ಯಜಮಾನಿಗೆ ಪ್ರತಿ ತಿಂಗಳು ನೀಡುವ ಎರಡು ಸಾವಿರ ರೂಪಾಯಿಯ ಗೃಹಲಕ್ಷ್ಮೀ ಯೋಜನೆಯನ್ನು ಸದ್ಯಕ್ಕೆ ತಡೆ ಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ಇದ್ದು, ಮನೆಯೊಡತಿಯೇ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಎರಡೂ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಧಿಕಾರಿಗಲ ಜತೆ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಕೆಲವರು 200 ರಿಂದ 300 ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ನಮಗೆ ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅಂತಹವರ ಪರವಾನಿಗೆ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.