ಪುತ್ತೂರು : ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕೊಳ್ತಿಗೆ ಗ್ರಾಮ ಪಂಚಾಯಿತಿ ಹಾಗೂ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗದ ಆಶ್ರಯದಲ್ಲಿ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-2023 6ನೇ ಸರಣಿ ಕಾರ್ಯಕ್ರಮದಲ್ಲಿ ಏಳು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು.
ಹಿರಿಯ ಸಾಹಿತಿಗಳಾದ ಎಸ್.ಜಿ.ಕೃಷ್ಣ, ಗಣೇಶ್ ಭಟ್ ಮಾಪಲಮಜಲು, ಹಾ.ಮ.ಸತೀಶ, ಉದಯ ಗೌರಿ ಬಿರ್ಮಕಜೆ, ಯುವ ಸಾಹಿತಿ ಪೂರ್ಣಿಮಾ ಪೆರ್ಲಂಪಾಡಿ, ಯುವ ಗಾಯಕ ರವಿ ಪಾಂಬಾರು ಹಾಗೂ ಹಿರಿಯ ಸಹಕಾರಿ ಕುಂಟಿಕಾನ ಲಕ್ಷ್ಮಣ ಗೌಡ ಅವರನ್ನು ಕೊಳ್ತಿಗೆ ಗ್ರಾಪಂ ಅಧ್ಯಕ್ಷ ಶ್ಯಾಮ ಸುಂದರ ರೈ ಸನ್ಮಾನಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡೆಳಿತ ಮಂಡಳಿ ಅಧ್ಯಕ್ಷ ತೀರ್ಥಾನಂದ ದುಗ್ಗಳ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕೊಳ್ತಿಗೆ ಗ್ರಾಪಂ ಪಿಡಿಒ ಸುನಿಲ್ ಎಚ್., ಹಿರಿಯ ಕೃಷಿಕ ಕೆ.ವಸಂತ ಕುಮಾರ್ ರೈ ದುಗ್ಗಳ ಮತ್ತಿತರರು ಉಪಸ್ಥಿತರಿದ್ದರು.
























