ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ

ಪುತ್ತೂರು: ಪುತ್ತೂರು ಕ್ಷೇತ್ರದ ಜನತೆಗಾಗಿ ಮತ್ತು ಮಳೆ,ಬೆಳೆ ಗಾಗಿ ಪುತ್ತೂರು ಶಾಸಕ ಅಶೋಕ್ ರೈಯವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು.‌

ಮಳೆಗಾಲ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ ಆದರೆ ಇನ್ನೂ ಸಮೃದ್ದವಾಗಿ ಮಳೆ ಬಂದಿಲ್ಲ. ಕೇತ್ರದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಬೆಳೆ ಬಂದು ಜನರಿಗೆ ನೆಮ್ಮದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ , ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಸಹಿತ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top