ಪುತ್ತೂರು: ಹಿಂದೂ ದೇವಸ್ಥಾನದ ಒಳಗೆ ಅನ್ಯಮತೀಯರು ಪ್ರವೇಶಿಸಿದ್ದು, ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರ ತೆಗೆಯುತ್ತಿರುವುದು ಭಕ್ತರ ಗಮನಕ್ಕೆ ಬಂದಿದ್ದು ಪುತ್ತಿಲ ಪರಿವಾರ ತೀವ್ರವಾಗಿ ಖಂಡಿಸಿದೆ.
ಭಾವಚಿತ್ರ ತೆಗೆದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾದರೆ ದೇವಸ್ಥಾನದ ಆಡಳಿತ ಮಂಡಳಿ ನೇರ ಹೊಣೆಯಾಗಿರುತ್ತದೆ ಎಂದು ತಿಳಿಸಿದೆ.
ದೇವಸ್ಥಾನದಲ್ಲಿನ ಹಾಗೂ ಭಕ್ತರ ನಂಬಿಕೆಗೆ ಧಕ್ಕೆಯಾದಲ್ಲಿ ಪುತ್ತಿಲ ಪರಿವಾರದಿಂದ ತೀವ್ರ ಹೋರಾಟ ನಡೆಸಲಾಗುವುದು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತಿಲ ಪರಿವಾರ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಮಾಡಿದೆ.