ಹೊಸದಿಲ್ಲಿ: ಪುತ್ತೂರು: ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟವರು. ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾಕ್ಷಿ ಅಹುಜಾ ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಈ ಸಂದರ್ಭ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಗಂಭೀರ ಸ್ಥಿತಿಗೆ ತಲುಪಿದ್ದರು. ಅವರ ಜೀವ ುಳಿಸುವ ಯತ್ನವಾಗಿ ಸ್ಥಳದಲ್ಲಿದ್ದವರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಸಹೋದರಿ ಮಾಧ್ವಿ, ಚೋಪ್ರಾ, ಸಂಬಂಧ ಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ಆರೋಫಿಸಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.