ಹಾಸನ : ರಾಜ್ಯಮಟ್ಟದ 514ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಸಮಾರಂಭ ಹಾಸನ ನಗರದಲ್ಲಿ ಮಂಗಳವಾರ ನಡೆಯಿತು.
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಕೆ ಎನ್ ರಾಜಣ್ಣ, ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕರುಗಳಾದ ಕೆ ಎಂ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಸಿ ಎನ್ ಬಾಲಕೃಷ್ಣ, ಸಿಮೆಂಟ್ ಮಂಜು, ಎಚ್ ಕೆ ಸುರೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಹಾಸನ ಜಿಲ್ಲಾ ಅಧ್ಯಕ್ಷರು, ನಿರ್ದೇಶಕರು, ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಹಾಸನ ಜಿಲ್ಲೆಯ ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.