ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ ಜಯಂತಿ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆ ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು.

ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 24ನೇ ಶತಮಾನದಲ್ಲಿಯೂ ನೆನಪಿಸಿಕೊಳ್ಳಲಾಗುತ್ತಿದೆ. ಸುಂದರ ನಗರ ನಿರ್ಮಾಣ, ವ್ಯಾವಹಾರಿಕ ಕೇಂದ್ರಗಳ ನಿರ್ಮಾಣ, ವಿವಿಧ ಕಸುಬುಗಳಿಗೆ ಪೂರಕವಾಗಿ ಮಾರುಕಟ್ಟೆ ನಿರ್ಮಾಣ, ಕೃಷಿಕರಿಗೆ ಆವಶ್ಯಕವಾದ ಸೌಲಭ್ಯಗಳು, ಕೆರೆ ಉದ್ಯಾನವನ, ದೇವಸ್ಥಾನಗಳ ನಿರ್ಮಾಣ ಸುಮದರವಾಗಿ ನಿರ್ಮಿಸಿಕೊಟ್ಟು ಬೆಂಗಳೂರನ್ನು ವಿಶ್ವಕ್ಕೇ ಮಾದರಿ ನಗರವಾಗಿ ನಿರ್ಮಿಸಿಕೊಟ್ಟಿದ್ದರು. ಅಭಿವೃದ್ಧಿಯ ಹೆಸರಿನಲ್ಲಿ ಕೆರೆಗಳು ಮುಚ್ಚಿಹೋಗಿದೆ. ಉಳಿದ ಕೆರೆಗಳನ್ನು ಸಂರಕ್ಷಣೆ ಮಾಡಬೇಕು. ದೂರದೃಷ್ಠಿಯಲ್ಲಿ ನಗರದ ಅಭಿವೃದ್ಧಿಗೆ ನಾವೂ ಕೈಜೋಡಿಸಬೇಕು. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗ ಕೊಂಡಯ್ಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಸಂಸ್ಕರಣಾ ಉಪನ್ಯಾಸ ನೀಡಿದ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಡಾ.ಶ್ರೀಧರ ಗೌಡ ಪಾಣತ್ತಿಲ ಮಾತನಾಡಿ, ಹಿಂದಿನ ಬೇರುಗಳ ಸಾಧನೆಗಳು ಇತಿಹಾಸಲ್ಲಿ ಅಡಗಿದೆ. ಮಹಾನ್ ವ್ಯಕ್ತಿಗಳ ಜನ್ಮ ದಿನಾಚರಣೆಯ ಮೂಲಕ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸುವ ಮೂಲಕ ಗೌರವ ನೀಡಬೇಕು ಎಂದರು.































 
 

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಕೆಂಪೇ ಗೌಡರ ಜಯಂತಿ ಆಚರಣೆಯ ಮೂಲಕ ಅವರ ಆದರ್ಶವನ್ನು ತಿಳಿಸಿಕೊಡುವ ಕಾರ್ಯವಾಗುತ್ತಿದೆ. ಅವರ ಕಲ್ಪನೆಯ ನಗರ, ಅವರ ದೂರದೃಷ್ಟಿಯ ಚಿಂತನೆಗಳನ್ನು ಇಂದಿನ ಜನತೆ ಮನಗಾಣುವಂತಾಗಿದೆ ಎಂದರು.

ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಶಿಲ್ದಾರ್ ಶಿವಶಂಕರ್, ಕಾರ್ಯದರ್ಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಇ., ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ ಗೌಡ ಕಣಜಾಲು, ಒಕ್ಕಲಿಗ ಗೌಡ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಎ.ವಿ ನಾರಾಯಣ, ದಯಾನಂದ, ರವಿ ಮುಂಗ್ಲಿಮನೆ, ಗೌರಿ ಬನ್ನೂರು, ಪದ್ಮಯ್ಯ ಗೌಡ, ಸೇರಿದಂತೆ ಒಕ್ಕಲಿಗ ಗೌಡ ಸೇವಾ ಸಮಾಜದ ಪದಾಧಿಕಾರಿಗಳು, ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.

ತಾಲೂಕು ಕಚೇರಿಯ ದಯಾನಂದ ಸ್ವಾಗತಿಸಿದರು. ಉಪತಹಶೀಲ್ದಾರ್ ಸುಲೋಚನಾ ಪಿ.ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top