ಬೆಳ್ತಂಗಡಿ: ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ನೌಷದ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿಗೆ. ಅಧಿಕಾರಿಗಳು ಎನ್ಐಎ ಕಚೇರಿಗೆ ಹಾಜರಾಗಲು ನೋಟೀಸ್ ನೀಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ.
ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಂದು ದ.ಕ. ಹಾಗೂ ಕೊಡಗು ಜಿಲ್ಲೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.