ಸುಳ್ಯ: ಯುವಕನೋರ್ವ ಬಂದೂಕಿನಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ರವಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು.
ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಗುಡ್ಡವೊಂದರಲ್ಲಿ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಮೃತ ಯುವಕ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸಕ್ಕಿದ್ದ ಎನ್ನಲಾಗಿದ್ದು,
ಸ್ಥಳಕ್ಕೆ ರಾತ್ರಿಯೇ ಪೋಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲುನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.