ವಿಟ್ಲ ಜೋಗಿಮಠದಲ್ಲಿ ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: ವಿವಾಹಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಗಿಮಠದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕೈರಂಗಳ ಗ್ರಾಮದ ಮೋಟುಗೋಳಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರಿ ಅನಿಶಾ (34) ಆತ್ಮಹತ್ಯೆ ಮಾಡಿಕೊಂಡವರು.

ಈ ಕುರಿತು ಮೃತರ ಸಹೋದರ ಮುನೀರ್ ಅಹಮ್ಮದ್, ತನ್ನ ಅಕ್ಕನ ಸಾವಿನಲ್ಲಿ ಯಾವುದೇ ಸಂಶಯವಿಲ್ಲ. ನಾಲ್ಕನೇ ಹೆರಿಗೆಯಾದ ಬಳಿಕ ಮಾನಸಿಕವಾಗಿ ನೊಂದಿದ್ದಳು ಎಂದು ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top