ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ |

ಪುತ್ತೂರು : ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ” ಎಂದು ಪುತ್ತೂರಿನ ಕ್ಯಾಂಪ್ಕೋ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ  ಕೃಷ್ಣ ಕುಮಾರ್ ಹೆಚ್ ಎಂ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ  (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐ ಕ್ಯೂ ಎ ಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಧಿತ್ವ-2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜ್ಞಾನ ಮತ್ತು ಅಭ್ಯಾಸದೊಳಗೆ  ಜೀವನದ ಯಶಸ್ಸಿನ ಗುಟ್ಟು ಅಡಗಿದೆ. ಇದರೊಂದಿಗೆ ಹೊಸ ಹೊಸ ಅವಿಷ್ಕಾರಗಳನ್ನು ಮಾಡುತ್ತಲೇ ಇರಬೇಕು. ಹಾಗೆಯೇ ಮಾಡಿದಂತಹ ಪ್ರಯತ್ನಗಳು ನಿಷ್ಪಲವಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಕೌಶಲ್ಯಾಭಿವೃದ್ಧಿಯಂತಹ ಕಾರ್ಯಕ್ರಮಗಳು ಅಗತ್ಯ “ಎಂದು ಅಭಿಪ್ರಾಯಪಟ್ಟರು.































 
 

ಮುಖ್ಯ ಻ತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ, “ವಿದ್ಯಾರ್ಥಿಗಳು ಯಾವತ್ತೂ ತಮ್ಮ ಪ್ರತಿಭೆಗಳನ್ನು ಹೊರಹಾಕಲು ವೇದಿಕೆಗಳನ್ನು ಬಳಸಿಕೊಳ್ಳಬೇಕೇ ಹೊರತು  ಪ್ರಶಸ್ತಿಗಾಗಿ ಅಲ್ಲ. ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಸಹ ಪ್ರತಿಭೆಗಳನ್ನು ರೂಪಿಸುವ ಒಂದು ಉತ್ತಮ ವೇದಿಕೆ. ಇದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಡೀನ್, ಎಂ ಕಾಂ ವಿಭಾಗದ  ಮುಖ್ಯಸ್ಥೆ ಡಾ.  ವಿಜಯ ಸರಸ್ವತಿ ಬಿ ,  ಪರೀಕ್ಷಾಂಗ ಕುಲಸಚಿವ ಡಾ. ಹೆಚ್ ಜಿ ಶ್ರೀಧರ್, ಕಾಲೇಜಿನ ವಿಶೇಷ ಅಧಿಕಾರಿ  ಡಾ. ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಅಕ್ಷಿತಾ ಸ್ವಾಗತಿಸಿ, ಜಗತ್ ವಂದಿಸಿದರು. ವಿದ್ಯಾರ್ಥಿನಿಯರಾದ ಅನನ್ಯ, ಶರಣ್ಯ, ಮೈತ್ರಿ ಪ್ರಾರ್ಥಿಸಿ, ವಿದ್ಯಾರ್ಥಿನಿಯರಾದ ವಿಭಾಶ್ರೀ ಭಟ್ ಹಾಗೂ ಲತಾ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top