ಪುತ್ತೂರು : ಸಂಭ್ರಮದ ಬಕ್ರೀದ್ ಹಬ್ಬವನ್ನು ಗುರುವಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸಿದರು.
ಬ್ರಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಹೊಸ ಬಟ್ಟೆ ಧರಿಸಿ ಆಯಾ ತಾಲೂಕು, ವಲಯ ಪ್ರಾರ್ಥನಾ ಮಂದಿರಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಸೀದಿಗಳಲ್ಲಿ ಧರ್ಮಗುರುಗಳು ಸಂದೇಶ ನೀಡಿದರು. ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ಕೋರಿದರು.
ಪುತ್ತೂರು ನಗರದಲ್ಲಿ ಹಬ್ಬದ ಹಿನ್ನಲೆಯಲ್ಲಿ ಜನಸಂಖ್ಯೆ ಭಾರೀ ವಿರಳ ಇದ್ದುದು ಕಂಡು ಬಂದಿದ್ದು, ಬಹುತೇಕ ಮುಸ್ಲಿಂ ಬಾಂಧವರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ತಮ್ಮ ತಮ್ಮ ಮನೆಗಳಲ್ಲಿ ಸಂಭ್ರಮದ ಹಬ್ಬದಲ್ಲಿ ಪಾಲ್ಗೊಂಡರು.