ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟುಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಮಾಣಿಲ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಬೇಡಿಕೆಗಳುಳ್ಳ ಮನವಿಯನ್ನು ಶಾಸಕರಿಗೆ ನೀಡಲಾಯ್ತು. ಹಂತ ಹಂತವಾಗಿ ಶಾಲಾ ಅಗತ್ಯತೆಗಳನ್ನು ಪೂರೈಸುವುದಾಗಿ ಶಾಸಕರು ಭರವಸೆ ನೀಡಿದರು. ಶಾಸಕರಿಗೆ ಶಾಲೆಯ ಪರವಾಗಿ ಶಾಲು ಹೊದಿಸಿ, ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯ್ತು.



































 
 

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಮ್ .ಎಸ್ ಮಹಮ್ಮದ್, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ, ಶಾಲಾ SDMC ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ, ಸದಸ್ಯ, ದಾನಿ ಮುರುವ ನಡುಮನೆ ಮಹಾಬಲ ಭಟ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕ ಭುವನೇಶ್ವರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕ ಉಮಾನಾಥ ರೈ ಕಾರ್ಯಕ್ರಮ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top