ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ

ಪುತ್ತೂರು: ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆಗೊಳಿಸುವಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಶಸ್ವಿಯಾಗಿದ್ದಾರೆ.

ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಅವಧಿ ಮುಗಿಯುತ್ತಾ ಬಂದರೂ ಪ್ರೀಮಿಯಂ ಪಾವತಿಯ ಬಗ್ಗೆ ರೈತರಿಗೆ ಯಾವುದೇ ಸೂಚನೆ ನೀಡದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಮತ್ತು ಕಾಳುಮೆಣಸನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ರೈತರು ನಿರಾಶಡಗೊಂಡಿದ್ದರು.

ಈ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕ ಅಶೋಕ್ ರೈ ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ ಎಂ.ಕೆ.ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿ ಅಡಿಕೆ ಹಾಗೂ ಕಾಳುಮೆಣಸನ್ನು ಪ್ರಧಾನಿ ಫಸಲು ಭಿಮಾ ಯೋಜನೆಗೆ ಸೇರ್ಪಡೆಗೊಳಿಸುವಂತೆ ಮನವಿ ಮಾಡಿದ್ದರು. ಜೂ.28 ರಂದು ಸಚಿವ ಸಂಪುಟ ಸಭೆಯಲ್ಲಿ ತೋಟಗಾರಿಕಾ ಸಚಿವರು ಅಂಗೀಕಾರ ಪಡೆದಿದ್ದು, ಒಂದೆರಡು ದಿನಗಳ ಒಳಗಾಗಿ ರಾಜ್ಯ ಸರಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ಅಶೋಕ್ ಕುಮಾರ್ ತಿಳಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top