ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಶುಭಾರಂಭ

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಕಡಬ ಮಿನಿ ವಿದಾನಸೌಧ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು.

ಬೆಳಗ್ಗೆ 7.00 ಗಂಟೆಗೆ ಗಣಹೋಮ ಪೂಜೆ ನಡೆದ ಬಳಿಕ 9.00 ಗಂಟೆಗೆ ಜನಸಂಘ ಮತ್ತು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆ ಗುತ್ತು ಪೆರಾಬೆ, ತನಿಯಪ್ಪ ಮಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು, ಹಿರಿಯರು, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಪ್ರಮುಖರು, ಚುನಾಯಿತ ಜನಪ್ರತಿನಿದಿಗಳು, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top