ಪುರುಷರಕಟ್ಟೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ |

ಪುತ್ತೂರು: ಪುತ್ತೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುರುಷರಕಟ್ಟೆಯಲ್ಲಿ ಶನಿವಾರ ನಡೆದಿದೆ.

7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತೂಹಲಕ್ಕೆ ಪುಷ್ಟಿ ನೀಡಿದೆ.

ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿ ಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. 7 ವರ್ಷದ ಹಿಂದೆ ಅವರ ಪತಿ ಪ್ರವೀಣ್ ಅವರು ಕೂಡಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಕಾವ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂ.30ರಂದು ಕಾವ್ಯ ಅವರ ಪುತ್ರ ಪ್ರತೀಕ್ ಎಂಬವರು ಬೆದ್ರಾಳ ಸಮೀಪ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇದರ ಬೆನ್ನಲ್ಲೇ ಆತನ ತಾಯಿ ಕಾವ್ಯ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top