ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ | ಸಂಜೆ ಸತ್ಯಸಾಯಿ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಿಕೆ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ 2ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ 3.40ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಅಲ್ಲದೆ , ಸಂಜೆ 6 ಗಂಟೆವರೆಗೆ ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top