ಬೆಂಗಳೂರು: ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ.
ಹೀಗೆಂದು ಕಾಂಗ್ರೆಸ್ ಟ್ವಿಟ್ ಮೂಲಕ ಲೇವಡಿ ಮಾಡಿದೆ.
ಸರಕಾರ ರಚನೆ ಆಯ್ತು ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಎಂದಿದೆ.ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ’ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ.
ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ. ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಫಿಕ್ಸ್ ಮಾಡಲಾಗಿತ್ತು, ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಇದಕ್ಕೆ ಬಿಜೆಪಿಯೇ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವಿಟ್ ಮಾಡಿದೆ