ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲಾ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಎರಡು ವಆರದ ಹಿಂದೆ ಪಶುಸಂಗೋಪನಾ ಸಚಿವರಿಗೆ ಶಾಸಕರಾದ ಅಶೋಕ್ ರೈ ಮನವಿ ನೀಡಿದ್ದು ಜು.3 ರಂದು ಅವರನ್ನು ಎರಡನೇ ಬಾರಿಗೆ ಖುದ್ದಾಗಿ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಕೊಯಿಲಾ ಗ್ರಾಮದ 260 ಎಕರೆ ಜಾಗವನ್ನು ಈಗಾಗಲೇ ಪಶು ವೈದ್ಯಕೀಯ ಕಾಲೇಜಿಗೆ ಮೀಸಲಿಟ್ಟಿದ್ದು, ಇದೇ ಪರಿಸರದಲ್ಲಿ ಸುಮಾರು 680 ಎಕರೆ ಜಾಗವು ಪಶು ಸಂಗೋಪನೆ ಇಲಾಖೆಗೆ ಸೇರಿದ್ದು, ಯಾವುದೇ ಉಪಯೋಗಕ್ಕೆಬಾರದೇ ಪಾಳು ಬಿದ್ದಿರುತ್ತದೆ, ಈ 680 ಎಕರೆ ಜಾಗದಲ್ಲಿ ಪಿ.ಪಿ.ಪಿ, ಮಾದರಿಯಲ್ಲಿ ಪೌಲ್ಟ್ರಿ ಫಾರಂ, ಕುರಿ ಸಾಕಾಣಿಕೆ,ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅನುಕೂಲವಾಗುವಂತೆ ತಾವುಗಳು ನೋಡಲ್ ಅಧಿಕಾರಿಯನ್ನು ನೇಮಿಸಿ, ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿದಲ್ಲಿ ಗುತ್ತಿಗೆ ಆಧಾರದ ಮೇಲೆ ಪಡೆಯಲು ಹೆಚ್ಚಿನ ಖಾಸಗಿ ಸಂಸ್ಥೆಗಳು ಆಸಕ್ತರಾಗಿರುತ್ತಾರೆ. ಇದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಹಾಗೂ ಪಿ.ಪಿ.ಪಿ. ಮಾದರಿಯಿಂದ ಸರ್ಕಾರಕ್ಕೆ ಕಂದಾಯವು ಸಹ ಸಂಗ್ರಹಣೆಯಾಗುತ್ತದೆ. ಅಲ್ಲದೇ ಪಾಳು ಬಿದ್ದಿರುವ ಜಾಗವು ಸಹ ಉಪಯೋಗವಾಗುತ್ತದೆ ಎಂದು ಸಚಿವರಾದ ಕೆ ವೆಂಕಟೇಶ್ ಅವರಲ್ಲಿ ವಿವರಿಸಿದ್ದಾರೆ. ಮತುಕತೆ ವೇಳೆ ಶಾಸಕರಿಗೆ ಸಚಿವರು ಸ್ಪಂದಿಸುವ ಭರವಸೆಯನ್ನು ನೀಡಿದ್ದಾರೆ.

ನೂರಾರು ಮಂದಿಗೆ ಉದ್ಯೋಗ :



































 
 

ಕೊಯಿಲಾ ಫಾರಂನಲ್ಲಿ ಪಾಳುಬಿದ್ದಿರುವ 680 ಎಕ್ರೆ ಜಾಗದಲ್ಲಿ ಖಾಸಗಿ ಸಂಶ್ಥೆಯವರು ಗುತ್ತಿಗೆ ಆಧಾರದಲ್ಲಿ ಉದ್ಯಮವನ್ನು ಆರಂಭ ಮಾಡಿದ್ದಲ್ಲಿ ನೂರಾರು ಮಂದಿಗೆ ಉದ್ಯೋಗವೂ ದೊರೆಯಲಿದೆ. ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರು ಈ ಪ್ರಯತ್ನವನ್ನು ಮಾಡುತ್ತಿದ್ದಾರೆ. ಉದ್ಯಮದಿಂದ ಸರಕಾರಕ್ಕೆ ಆರ್ಥಿಕವಾಗಿ ಲಾಭವಾಗಲಿದ್ದು ಕೊಯಿಲಾ ಗ್ರಾಮವೂ ಇನ್ನೂ ಹೆಚ್ಚಿನ ಅಭಿವೃದ್ದಿ ಕಾಣಲಿದೆ ಎಂದು ಶಾಸಕರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top