ಚಾಲಕನ ನಿಯಂತ್ರಣ ತಪ್ಪಿದ ಕಾರು | ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ,

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ತುಂಬೆಯಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದ್ದು ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top