ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆಯ ಉದ್ಘಾಟನಾ ಸಮಾರಂಭ ಜು.6 ಗುರುವಾರ ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಮಣಾಯಿ ಆರ್ಚ್ ಕಟ್ಟಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬಳಿಕ ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಪುತ್ತೂರು ನಗರ ಹಾಗೂ ಕಾಣಿಯೂರು ಶಾಖೆಗಳನ್ನು ತೆರೆದು ಸುಮಾರು ಏಳು ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಹೊಂದಿದೆ. ಕಳೆದ ಅವಧಿಯಲ್ಲಿ 400 ಕೋಟಿಗಿಂತಲೂ ಮಿಕ್ಕಿ ವ್ಯವಹಾರಗಳನ್ನು ಮಾಡಿದ್ದು, 3.5 ಕೋಟಿಗಿಂತ ಮಿಕ್ಕಿ ಪಾಲು ಬಂಡವಾಳವನ್ನು ಹೊಂದಿದೆ. ಕಳೆದ ಅವಧಿಯಲ್ಲಿ ಒಂದು ಕೋಟಿಗೂ ಮಿಕ್ಕಿ ಲಾಭ ಪಡೆದುಕೊಂಡಿದೆ. ಸುಮಾರು 80 ಕೋಟಿಗೂ ಮಿಕ್ಕಿ ಠೇವಣಿ ಹೊಂದಿದ್ದು, 75 ಕೋಟಿಗೂ ಮಿಕ್ಕಿ ಹೊರಬಾಕಿ ಸಾಲ ಇದೆ.
ಸ್ಥಾಪಕ ಅಧ್ಯಕ್ಷರಾಗಿ ದಿ.ಜಗನ್ನಾಥ ಬೊಮ್ಮೆಟ್ಟಿ, ಉಪಾಧ್ಯಕ್ಷ ಜೆ.ಕೆ.ವಸಂತ ಗೌಡ ಸೇವೆ ಸಲ್ಲಿಸಿದ್ದು, ನಂತರ ದಿನಗಳಲ್ಲಿ ರಾಮಕೃಷ್ಣ ಕರ್ಮಲ ಉಪಾಧ್ಯಕ್ಷರಾಗಿ ಪ್ರಸ್ತುತ ಚಿದಾನಂದ ಬೈಲಾಡಿ ಅಧ್ಯಕ್ಷರಾಗಿ, ಯು.ಪಿ.ರಾಮಕೃಷ್ಣ ಉಪಾಧ್ಯಕ್ಷರಾಗಿ, ನಿರ್ದೇಶಕರಾಗಿ ಮೋಹನ ಗೌಡ ಇಡ್ಯಡ್ಕ, ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಸತೀಶ್ ಪಾಂಬಾರು, ಪ್ರವೀಣ್ ಕುಂಟ್ಯಾನ, ಲೋಕೇಶ್ ಚಾಕೋಟೆ, ಸಂಜೀವ ಕೆದ್ಲೂರು, ಸುದರ್ಶನ ಗೌಡ ಕೋಡಿಂಬಾಳ, ತೇಜಸ್ವಿನಿ ಗೌಡ ಕಟ್ಟಪುಣಿ, ಸುಪ್ರೀತಾ ರವಿಚಂದ್ರ, ಆಂತರಿಕ ಲೆಕ್ಕಪರಿಶೋಧಕರಾಗಿ ಶ್ರೀಧರ ಕಣಜಾಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸುಧಾಕರ ಕೆ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ನಿಬಂಧಕಿ ತ್ರಿವೇಣಿ ರಾವ್ ಕೆ., ಐವರ್ನಾಡು ಸಹಕಾರಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಸಂಚಾಲಕೆ ಎಂ.ಪಿ.ಉಮೇಶ್, ಬೆಳ‍್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ್, ಕಾತ್ಯಾಯಿನಿ ಕಟ್ಟಡ ಮಾಲಕ ಬಿ.ಪವನ್ ಶೆಣೈ ಪಾಲ್ಗೊಳ್ಳಲಿದ್ದಾರೆ.