ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದೇ ಇರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ ಗೆ ಮುಂದಾಗಿದ್ದಾರೆ.
ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮನ್ನು ಕರೆದು ಚರ್ಚೆ ಮಾಡಬೇಕು, ಖಾತೆಗೆ ಹಣ ಹಾಕೋ ಬದಲು 10 ಕೆ.ಜಿಗೆ ಬೇರೆ ದವಸಗಳನ್ನ ನೀಡಿ, ಇಲ್ಲವೇ ಖಾತೆಗೆ ಹಣ ಹಾಕೀರಾದ್ರೆ ನಮಗೆ 10 ಕೆ.ಜಿಯ ಕಮಿಷನ್ ನೀಡಿ ಅನ್ನೋ ಪಟ್ಟು ಹಿಡಿದಿದ್ದಾರೆ.
ಜನರಿಗೆ 5 ಕೆ.ಜಿಗೆ ಹಣ ನೀಡಿದರೆ, ನಮಗೆ ನಷ್ಟ ಆಗೋದು ಪಕ್ಕ, ನಾವೂ 10 ಕೆಜಿ ಅಕ್ಕಿ ನೀಡಿದ್ದೇ ನಮಗೆ ಕಮಿಷನ್ ಹೆಚ್ಚಾಗಿ ಸಿಗುತ್ತೆ ಅಂತಾ ವೋಟ್ ಹಾಕಿದ್ವಿ. ಈಗ 5 ಕೆಜಿ ಅಕ್ಕಿ ನೀಡಿದ್ರೆ ಕಮಿಷನ್ ಕಟ್ ಆಗುತ್ತೆ. ಇದನ್ನೇ ನಂಬಿಕೊಂಡಿರೋ ನಾವೂ ಹೇಗೆ ಜೀವನ ಮಾಡೋದು ಅಂತಾ ನ್ಯಾಯಬೆಲೆ ವರ್ತಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.