ಮಂಗಳೂರು: ದ.ಕ., ಉಡುಪಿ ಹಾಗೂ ಉತ್ತರಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನಷ್ಟ ಸಂಭವಿಸಿದ್ದು, ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಸ್ತುವಾರಿ ಸಚಿವರು್ಗಳಾದ ದಿನೇಶ್ ಗುಂಡೂರಾವ್, ಮಂಕಾಳ ವೈದ್ಯ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸೂಚನೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದು ಪರಿಹಾರ ಕಾರ್ಯಗಳಿಗೆ ಅಧಿಕಾರಿಗಳನ್ನು ಸಜ್ಜಗೊಳಿಸುವಂತೆ ಸೂಚನೆ ನೀಡಿದ್ದಾರೆ.